ಪತ್ನಿ ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ➤ ದುಡುಕಿನ ನಿರ್ಧಾರ ಕೈಗೊಂಡ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.02: ಪತ್ನಿ, ಅತ್ತೆ ಕಿರುಕುಳದಿಂದ ಪತಿರಾಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಟಿಂಬರ್ ಯಾರ್ಡ್ ಲೇಔಟ್ ನಿವಾಸಿ ದರ್ಶನ್ (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ದರ್ಶನ್ ಪತ್ನಿ ಮತ್ತು ಅತ್ತೆಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದ ದರ್ಶನ್ 5 ತಿಂಗಳ ಹಿಂದೆ ಮದುವೆಯಾಗಿದ್ದು, ದಂಪತಿ ಕೆಂಗೇರಿಯ ಶ್ರೀನಿವಾಸಪುರದಲ್ಲಿ ವಾಸವಾಗಿದ್ದರು.

 

ಮದುವೆಯಾದ ಒಂದು ತಿಂಗಳ ನಂತರ ಮನೆಯಲ್ಲಿ ಕೌಟುಂಬಿಕ ಕಲಹ ಆರಂಭವಾಗಿದೆ. ಪತ್ನಿ ತವರಿಗೆ ಹೋಗಿ ಹೆಚ್ಚಿನ ಸಮಯ ಅಲ್ಲೇ ಇರುತ್ತಿದ್ದರು. ಮೊಬೈಲ್ ನಲ್ಲಿ ಬೇರೆಯವರೊಂದಿಗೆ ಹೆಚ್ಚಾಗಿ ಕಾಲಕಳೆಯುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ದರ್ಶನ್ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಂದೆ ದೂರು ನೀಡಿದ್ದಾರೆ. ಡೆತ್ ನೋಟ್ ನಲ್ಲಿ ಪತ್ನಿ ಹಾಗೂ ಪತ್ನಿಯ ತಾಯಿಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ದರ್ಶನ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Also Read  ಸೂಕ್ತ ದಾಖಲೆಗಳಿಲ್ಲದೆ 9 ಲಕ್ಷ ರೂ. ನಗದು ಕಾರಿನಲ್ಲಿ ಸಾಗಾಟ

 

error: Content is protected !!
Scroll to Top