ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.

 

ಸೋಮವಾರ ಬೆಳಿಗ್ಗೆ ಬಾಲಕಿಯ ತಂದೆ ತಾಯಿ ಮನೆಯಲ್ಲಿ ಇಲ್ಲದ ಸಂದರ್ಭ ವನ್ನು ಗಮನಿಸಿದ ಕಾಮುಕ ಆರೋಪಿ ಬಿಸ್ವಾಸ್ ಮನೆ ಸಮೀಪದ ಮರವೊಂದನ್ನು ಏರಿ ಮಾಡಿನ ಹೆಂಚು ತೆಗೆದು ಒಳನುಗ್ಗಿ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದಾಳೆ ಈ ವೇಳೆ, ಬೊಬ್ಬೆ ಕೇಳಿ ಸ್ಥಳೀಯರು ಓಡಿ ಬಂದು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Also Read  ಬಲ್ಯ: ಸೋಲಾರ್ ಪ್ಯಾನೆಲ್ ಕಳವು

 

 

error: Content is protected !!
Scroll to Top