ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com  ವಿಜಯಪುರ, ಜೂ 02: 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರದ ಸಿಂದಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ನಡೆದಿದೆ.ಬಾಲಕಿಯ ತಾಯಿ ಬೆಂಗಳೂರಿನಲ್ಲಿ ತನ್ನ ಮೂರು ಮಕ್ಕಳೊಂದಿಗೆ ವಾಸವಾಗಿದ್ದರು .

 

 

ಮನೆಯಲ್ಲಿ ಬಾಲಕಿಯ ತಾಯಿ ಇಲ್ಲದನ್ನು ಗಮನಿಸುತಿದ್ದ ಕಿರಾತಕ, ಪ್ರತಿ ಬಾರಿ ಬಾಲಕಿಯನ್ನು ಪುಸಲಾಯಿಸಿ, ಬಾಲಕಿ ತಾಯಿ ಮನೆಯಲ್ಲಿ ಇಲ್ಲದ ವೇಳೆ ಸಿಂಧಗಿ ಮೂಲದ 35 ವರ್ಷದ ವ್ಯಕ್ತಿಯೊಬ್ಬ ಬಾಲಕಿಯನ್ನು ಪುಸಲಾಯಿಸಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ನಿರಂತರ ಅತ್ಯಾಚಾರ ಎಸಗಿದ್ದ, ಇದರ ಪರಿಣಾಮ ಗರ್ಭಿಣಿಯಾಗಿದ್ದ ಬಾಲಕಿ ಈಗ ಮಗುವಿಗೆ ಜನ್ಮ ನೀಡಿದ್ದಾಳೆ.ಲಾಕ್ಡೌನ್ ಹಿನ್ನೆಲೆಯಲ್ಲಿ ಅಪ್ರಾಪ್ತೆ ತಾಯಿ ಮಕ್ಕಳೊಂದಿಗೆ ಸ್ವಗ್ರಾಮಕ್ಕೆ ಆಗಮಿಸಿದ್ದಳು. ಮೇ 30ರಂದು ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಬಾಲಕಿಯ ತಾಯಿ ವಿಜಯಪುರ ಮಕ್ಕಳ ಸಹಾಯವಾಣಿ ನಿರ್ದೇಶಕಿ ಸುನಂದಾ ಅವರ ಮೂಲಕ ಪೊಲೀಸರಿಗೆ ದೂರು ಸಲ್ಲಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿದ್ದಾರೆ.

Also Read  ➤ ಬೆಂಗಳೂರು 300 ಬೆಣ್ಣೆ ಹಣ್ಣಿನ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ

 

 

 

error: Content is protected !!
Scroll to Top