ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 03: ಭೂಗತ ಪಾತಕಿ ರವಿ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ರವಿ ಪೂಜಾರಿಯ ಸಹಚರನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಲಾಮ ಎಂದು ಗುರುತಿಸಲಾಗಿದೆ. ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ ಸುಲಿಗೆ ಸಹಾಯ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

 

 

ಸಿಸಿಬಿ ಅಧಿಕಾರಿಗಳು ಮಂಗಳೂರಿನಲ್ಲಿ ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಸದ್ಯ ಗುಲಾಮನನ್ನ 10 ದಿನ ಕಸ್ಟಡಿಗೆ ತೆಗೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ ಪೊಲೀಸರ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಸೆನಗಲ್ನಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬಂದಿಸಿದ್ದರು.

Also Read  ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..!

 

 

error: Content is protected !!
Scroll to Top