(ನ್ಯೂಸ್ ಕಡಬ) newskadaba.com ಕಾರವಾರ,ಜು.04 : ಕಾರವಾರ ಮೂಲದ ವ್ಯಕ್ತಿಯೊಬ್ಬರು ಕೋವಿಡ್-19 ಸೋಂಕಿನಿಂದ ಕುವೈತ್ ನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.
Also Read ಶಿರಾಡಿ ಘಾಟ್ ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಗುಡ್ಡ ಕುಸಿತ ➤ ಆಗಸ್ಟ್ 12ರ ವರೆಗೆ ವಾಹನ ಸಂಚಾರ ನಿಷೇಧ