PU ಇಂಗ್ಲಿಷ್ ಪರೀಕ್ಷೆ ➤ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲಿ ಪುನರಪಿ ತರಗತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.04 : ಮೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಅವರು, ಕೊರೊನಾ ಲಾಕ್ಡೌನ್ನಿಂದಾಗಿ ಸುಮಾರು 3 ತಿಂಗಳ ಅಂತರವಿರುವಾಗಿದ್ದು ಇದರಿಂದ ವಿದ್ಯಾರ್ಥಿಗಳು ಓದಿದ್ದನ್ನು ಮರೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಆನ್ಲೈನ್ನಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎಂದು  ತಿಳಿಸಿದ್ದಾರೆ

 

ಈ ಬಗ್ಗೆ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಮತ್ತು ಇಂಗ್ಲಿಷ್ ಉಪನ್ಯಾಸಕರು ವಿಶೇಷ ಗಮನ ಹರಿಸಬೇಕು. ಶಿವಮೊಗ್ಗ PU ಇಂಗ್ಲಿಷ್ ಉಪನ್ಯಾಸಕರ ವೇದಿಕೆ ಸಿದ್ಧಪಡಿಸಿದ ವಿಡಿಯೊ ಯೂಟ್ಯೂಬ್ ಪಾಠವನ್ನು ಇಲಾಖೆಯ www.pue.kar.nic.in ವೆಬ್ಸೈಟ್ನಲ್ಲಿ ಹಾಕಲಾಗಿದೆ. ಹೋಮ್ ಪೇಜ್ನಲ್ಲಿರುವII PUC ENGLISH SUBJECT REVISION VEDEOS ಲಿಂಕ್ ಬಳಸಿ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

Also Read  ಸುಳ್ಯ: ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ಸಜ್ಜನೋತ್ಸವ ಹಾಗೂ ನೂತನ ಸಭಾಭವನ ಉದ್ಘಾಟನೆ

 

error: Content is protected !!
Scroll to Top