ಕೋವಿಡ್ -19 ➤ ಭಾರತದಲ್ಲಿ ಆಶಾದಾಯಕ ಬೆಳವಣಿಗೆ

(ನ್ಯೂಸ್ ಕಡಬ) newskadaba.com  ದೆಹಲಿ ,ಜೂ 04: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ, ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಆಶಾದಾಯಕ ಬೆಳವಣಿಗೆಯಾಗಿದೆ.

 

ದೇಶದಲ್ಲಿ ಒಂದು ದಿನದಲ್ಲೇ 9,304 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 2.16.919 ಕ್ಕೆ ಏರಿಕೆಯಾಗಿದೆ. ಒಟ್ಟು 6075 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಪ್ರಸ್ತುತ 1.06737 ಪ್ರಕರಣಗಳು ಸಕ್ರಿಯವಾಗಿದ್ದು 1.04.107 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ದೇಶದಲ್ಲಿ ಶೇ 48.31ಕ್ಕೆ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4, 063 ರ ಗಡಿ ದಾಟಿದೆ. ಇನ್ನು ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದೆ. ರಾಜ್ಯದಲ್ಲಿ ಈಗಾಗಲೇ ಪ್ರಸ್ತುತ 1,514 ಮಂದಿ ಚೇತರಿಕೆಗೊಂಡಿದ್ದಾರೆ.ಹಾಗೂ 53 ಮಂದಿ ಈಗಾಗಲೇ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

Also Read  ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ|ದೇವಿ ಪ್ರಸಾದ್ ಕಾನತ್ತೂರು ಆಯ್ಕೆ

 

 

error: Content is protected !!
Scroll to Top