ಮಂಗಳೂರು: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ➤ ಇಬ್ಬರಿಗೆ ಗಾಯ



(ನ್ಯೂಸ್ ಕಡಬ) newskadaba.com ಮಂಗಳೂರು. ಜೂ. 4, ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಯುವಕ ಮತ್ತು ಯುವತಿ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನದ ಕೋಟೆಕಾರ್ ಬೀರಿಯಲ್ಲಿ ನಡೆದಿದೆ.





ರಸ್ತೆಯ ಅಂಚಿನಲ್ಲಿ ನಿಲ್ಲಿಸಲಾಗಿದ್ದ ಲಾರಿಯನ್ನು ಗಮನಿಸದ ಬೈಕ್ ಸವಾರನು ನಿಯಂತ್ರಣ ಕಳೆದುಕೊಂಡು ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಬೈಕ್ ಮುಂಭಾಗ ನಜ್ಜುಗುಜ್ಜಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತಕ್ಷಣವೇ ಸ್ಥಳೀಯರು ಇಬ್ಬರನ್ನೂ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.






 

error: Content is protected !!
Scroll to Top