ಆನ್ ಲೈನ್ ಕ್ಲಾಸ್ ➤ ಇಂಟರ್ನೆಟ್ ಗಾಗಿ ಮನೆಯ ಛಾವಣಿಯೇರಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ತಿರುವನಂತಪುರಂ. ಜೂ. 4, ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ನೆಟ್ ವರ್ಕ್ ಸಿಗದೇ ವಿದ್ಯಾರ್ಥಿಗಳು ತೊಂದರೆ ಎದುರಿಸುತ್ತಿದ್ದಾರೆ. ಕೇರಳದ ಪದವಿ ವಿದ್ಯಾರ್ಥಿನಿಯೊಬ್ಬಳು ನೆಟ್ ವರ್ಕ್ ಸಿಗದ ಕಾರಣ ಮನೆಯ ಛಾವಣಿ ಏರಿ ಕೂತಿದ್ದಾಳೆ.

ತಿರುವನಂತಪುರಂ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಮೊಬೈಲ್ ನೆಟ್‍ವರ್ಕ್ ಸಿಗದ ಕಾರಣ ತನ್ನ ಮನೆಯ ಛಾವಣಿ ಮೇಲೇರಿದ್ದಾಳೆ. ಲಾಕ್ ಡೌನ್ ಪರಿಣಾಮ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿದ್ದು, ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ. ದಿನಕ್ಕೆ ಸುಮಾರು 4 ಗಂಟೆಗಳ ಕಾಲ ಅಲ್ಲಿಯೇ ಕುಳಿತು ತರಗತಿಗೆ ಹಾಜರಾಗಿದ್ದಾಳೆ. ಈ ಬಗ್ಗೆ ಮಾತನಾಡಿರುವ ವಿದ್ಯಾರ್ಥಿನಿಯು ನನ್ನ ಮನೆಯ ಸುತ್ತಮುತ್ತ ಎಲ್ಲಾ ಕಡೆ ಮೊಬೈಲ್ ನೆಟ್ ವರ್ಕ್ ಗಾಗಿ ಅಲೆದಾಡಿದ್ದೇನೆ. ಆದರೆ ಎಲ್ಲಿಯೂ ನೆಟ್‍ವರ್ಕ್ ಸಿಗುತ್ತಿರಲಿಲ್ಲ, ಕೊನೆಗೆ ಮನೆಯ ಹಂಚಿನ ಮೇಲೆ ಹೋದಾಗ ಅಲ್ಲಿ ನೆಟ್‍ವರ್ಕ್ ಸಿಕ್ಕಿತ್ತು ಎಂದು ಹೇಳಿದ್ದಾಳೆ.

Also Read  ನರ್ಮದಾ ನದಿಗೆ ಬಿದ್ದ ಬಸ್ ➤ 12 ಮಂದಿ ದುರ್ಮರಣ

error: Content is protected !!
Scroll to Top