BREAKING NEWS ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ ನಾಲ್ವರು ಬಲಿ: 257 ಮಂದಿಗೆ ಸೋಂಕು ದೃಢ

ಬೆಂಗಳೂರು, ಜೂ.4: ರಾಜ್ಯದಲ್ಲಿ ಇಂದು ಕೊರೋನದಿಂದ ನಾಲ್ವರು ಸಾವನ್ನಪ್ಪಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 257 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಒಟ್ಟು 4,320ಕ್ಕೆ ಏರಿಕೆಯಾಗಿದೆ.

ಗುರುವಾರ ಒಂದೇ ದಿನ ಉಡುಪಿ ಜಿಲ್ಲೆಯೊಂದರಲ್ಲೇ 92 ಪ್ರಕರಣಗಳು ವರದಿಯಾಗಿದ್ದರೆ ರಾಯಚೂರಿನಲ್ಲಿ 88 ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು 2,651 ಸಕ್ರಿಯ ಕೋವಿಡ್ ಸೋಂಕಿನ ಪ್ರಕರಣಗಳು ಇವೆ. ಹಾಗೂ ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 4 ಜನರು ಕೋವಿಡ್ ನಿಂದಾಗಿ ಮೃತಪಟ್ಟಿದ್ದಾರೆ ಮತ್ತು ಈ ಮೂಲಕ ನಮ್ಮಲ್ಲಿ ಇಲ್ಲಿಯವರೆಗೆ ಕೋವಿಡ್ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 57ಕ್ಕೇರಿದಂತಾಗಿದೆ.

Also Read  ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ..!! ➤ ಸವಾರರಿಗೆ ಗಾಯ

ಇನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 13 ಜನ ಕೋವಿಡ್ ಸೋಂಕಿತರು ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

error: Content is protected !!
Scroll to Top