ಬಂಟ್ವಾಳ: ಅಪರೂಪದ ಬಿಳಿ ಹೆಬ್ಬಾವು ಪತ್ತೆ

(ನ್ಯೂಸ್ ಕಡಬ)newskadaba.com ಬಂಟ್ವಾಳ. ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಪ್ರದೇಶದಲ್ಲಿನ ಮನೆಯೊಂದರ ಬಳಿ ಅಪರೂಪಕ್ಕೆ ಕಾಣಸಿಗುವ ಬಿಳಿ ಬಣ್ಣದ ಹೆಬ್ಬಾವೊಂದು ಕಾಣಸಿಕ್ಕಿದ್ದು, ಅದನ್ನು ಸುರಕ್ಷಿತವಾಗಿ ಪಿಲಿಕುಳಕ್ಕೆ ಕಳುಹಿಸಿಕೊಡಲಾಗಿದೆ.

ಕಾವಳಕಟ್ಟೆ ನಿವಾಸಿ ನೌಶಾದ್ ಎಂಬವರ ಮನೆಯಲ್ಲಿ ಈ ಹಾವು ಕಂಡುಬಂದಿದ್ದು, ತಕ್ಷಣ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಲಾಯಿತು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅವರು ನಿತ್ಯಪ್ರಕಾಶ್ ಬಂಟ್ವಾಳ ಹಾಗೂ ಪ್ರಸಾದ್ ಎಂಬವರ ಸಹಕಾರದಿಂದ ಅದನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಇದನ್ನು ವಲಯ ಅರಣ್ಯಾಧಿಕಾರಿಗಳ ನಿರ್ದೇಶನದಂತೆ ಪಿಲಿಕುಳಕ್ಕೆ ಕಳುಹಿಸಿಕೊಡಲಾಗಿದೆ ಎಂದಿದ್ದಾರೆ.

Also Read  ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ

error: Content is protected !!
Scroll to Top