(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 5, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಇದೇ ಜೂನ್ 18ರಂದು ರಾಜ್ಯಾದ್ಯಂತ ಇಂಗ್ಲೀಷ್ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕೆಂದು ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ.
ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೂ, ಪರೀಕ್ಷಾ ಕೇಂದ್ರದಿಂದ ತಮ್ಮ ಮನೆಯವರಿಗೂ ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಕೇಂದ್ರ ಕಚೇರಿ ಸುತ್ತೋಲೆ ಹೊರಡಿಸಿದೆ. ವಿದ್ಯಾರ್ಥಿಗಳು ಬಸ್ಗಳಲ್ಲಿ ಪ್ರಯಾಣ ಮಾಡಬೇಕಾದ ಸಂದರ್ಭದಲ್ಲಿ ಪರೀಕ್ಷಾ ಪ್ರವೇಶ ಪತ್ರ ಅಥವಾ ಪ್ರಸ್ತುತ ಸಾಲಿನ ವಿದ್ಯಾರ್ಥಿ ಸ್ಮಾರ್ಟ್ ಕಾರ್ಡ್ ತೋರಿಸಿ ಈ ಉಚಿತ ಪ್ರಯಾಣ ಸಾಮಾನ್ಯ ಸೇವೆ ಪಡೆದುಕೊಳ್ಳಬಹುದು. ಈ ಸೌಲಭ್ಯ ಕರ್ನಾಟಕ ಸಾರಿಗೆಯ ಕೆಂಪು ಬಸ್ಗಳಲ್ಲಿ ಮಾತ್ರ ಇರಲಿದೆ.