ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ ➤ ಅಪಾರ ನಷ್ಟ



(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ 05:  ಮರದ ದಿಮ್ಮಿಗಳನ್ನು ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಉರುಳಿ ಬಿದ್ದ ಘಟನೆ ಬಂಟ್ವಾಳದ ಮಾರ್ನಬೈಲು ಜಂಕ್ಷನ್ ನಲ್ಲಿ ನಡೆದಿದೆ.ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿದೆ.





ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದೆ.ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಳಿಗ್ಗೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿಹೊಡೆದಿದೆ ನಂತರ ರಸ್ತೆಯ ಬದುಗೆ ಮಗುಚಿ ಬಿದ್ದಿದೆ. ಲಾರಿ ಮಗುಚಿ ಬಿದ್ದ ವೇಳೆ ಲಾರಿ ಚಾಲಕ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್. ಐ ರಾಜೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

 

error: Content is protected !!
Scroll to Top