ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜೂ.5: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜೂ.19ರಂದು ನಡೆಯುವ ರಾಜ್ಯಸಭೆ ಚುನಾವಣೆಗೆ ಅಧಿಕೃತ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಿದೆ.

ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಟಿಕೆಟ್ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯಸಭೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯನ್ನಾಗಿಸಿದೆ. ಕಾಂಗ್ರೆಸ್‌ಗೆ ರಾಜ್ಯಸಭೆಯಲ್ಲಿ ಮೋದಿ ಸರಕಾರವನ್ನು ಎದುರು ಹಾಕಿಕೊಳ್ಳುವ ಸಾಮರ್ಥ್ಯಯುಳ್ಳ ಅನುಭವಿ ನಾಯಕರ ಅಗತ್ಯವಿದ್ದು, ಅದಕ್ಕಾಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅಯ್ಕೆ ಮಾಡಲಾಗಿದೆ ಎನ್ನಲಾಗಿದೆ.

Also Read  ಬಗರ್ ಹುಕುಂ ಅರ್ಜಿ ವಿಲೇವಾರಿ - ಸೆಪ್ಟೆಂಬರ್ ನಿಂದ ಪೋಡಿ ಅಭಿಯಾನಕ್ಕೆ ಚಾಲನೆ

ಮಲ್ಲಿಕಾರ್ಜುನ್ ಖರ್ಗೆ ಅವರ ಆಯ್ಕೆ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಕೆಲಸ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಬಲವೂ ಇದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

error: Content is protected !!
Scroll to Top