ಮಂಜುನಾಥನ ದರ್ಶನಕ್ಕೆ ಸಕಲ ಸಿದ್ಧತೆ ➤ ಸಾಮಾಜಿಕ ಅಂತರ ಕಡ್ಡಾಯ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.6: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಒದಗಿಸಲಾಗಿದೆ. ಇದಕ್ಕೆ ಸಂಬಂದ ಪಟ್ಟಂತೆ ದೇವಸ್ಥಾನದ ಒಳ ಪ್ರವೇಶ ಮಾಡುವವರು ತೆಗೆದುಕೊಳ್ಳಬೇಕಾದ ಮುಂಜಗರೂಕತೆ ಕ್ರಮಗಳು ಇಂತಿವೆ.

 

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಇದೇ 8 ರಂದು ಮಾಡಿಕೊಡಲಾಗುವುದೆಂದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ.ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ..ಮುಖಕ್ಕೆ ಮಾಸ್ಕ್ ಧರಿಸಿರಬೇಕು, ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಕೈಗೆ ಸ್ಯಾನಿಟೈರ್ಸ ಹಾಕಿಸಿಕೊಳ್ಳಬೇಕು. ಅರ್ಚಕ ಸಿಬ್ಬಂದಿಗಳು, ರಕ್ಷಣಾ ಸಿಬ್ಬಂದಿಗಳು, ಸ್ವಯಂ ಸೇವಕರು ಕೈಗೊಳ್ಳಬೇಕಾದ ಕ್ರಮಗಳನ್ನು ವಿಮರ್ಶಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಅದೇ ರೀತಿ ಅನ್ನಪೂರ್ಣ ಭೋಜನಾಲಯದಲ್ಲಿ ಭೋಜನಕ್ಕೆ ಬರುವವರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ. ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ತಮ್ಮ ಆರೋಗ್ಯವನ್ನು ಪರಿಶೀಲಿಸಿಕೊಳ್ಳುವರೇ ಕೋರಿದೆ. ಜ್ವರ, ಕೆಮ್ಮು ಮುಂತಾದ ಅನಾರೋಗ್ಯ ಸ್ಥಿತಿಯಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಡಲು ಸಾಧ್ಯವಾಗುವುದಿಲ್ಲ. ಭಕ್ತಾದಿಗಳು ದೇವಸ್ಥಾನದ ಆಡಳಿತದ ಜೊತೆಯಲ್ಲಿ ಸಹಕಾರ ನೀಡಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Also Read  ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟ ➤ ನಾಲ್ವರು ಮೃತ್ಯು..!

 

 

error: Content is protected !!
Scroll to Top