ಸೇತುವೆಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 7, ಯುವಕನೋರ್ವ ಮೈಸೂರು ರಸ್ತೆಯ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ಮಂತರಪಾಳ್ಯದ ಸುರೇಶ್ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ಮೇಲ್ಸೇತುವೆಯಿಂದ ಏಕಾಏಕಿ ಜಿಗಿದ ಇವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಇವರನ್ನು ಸಾರ್ವಜನಿಕರು ಮತ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top