ಕನ್ನಡದ ಖ್ಯಾತ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ ➤ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.07. ಸ್ಯಾಂಡಲ್​ವುಡ್​ ನ ಖ್ಯಾತ ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದಾಗಿ ಭಾನುವಾರದಂದು ಮೃತಪಟ್ಟಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.

ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್​ ಅವರನ್ನು ವಿವಾಹವಾಗಿದ್ದರು. ಚಿರಂಜೀವಿ ಸರ್ಜಾಗೆ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಶನಿವಾರದಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

error: Content is protected !!
Scroll to Top