(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.07. ಸ್ಯಾಂಡಲ್ವುಡ್ ನ ಖ್ಯಾತ ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದಾಗಿ ಭಾನುವಾರದಂದು ಮೃತಪಟ್ಟಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.

ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್ ಅವರನ್ನು ವಿವಾಹವಾಗಿದ್ದರು. ಚಿರಂಜೀವಿ ಸರ್ಜಾಗೆ ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಶನಿವಾರದಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.













