ಕೊರೋನಾ ಹಿನ್ನೆಲೆ ಎಲ್ಲಾ ಪರೀಕ್ಷೆಗಳನ್ನು ರದ್ದುಪಡಿಸುವಂತೆ ವಾಟಾಳ್ ಒತ್ತಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 8, ಎಸ್ಸೆಸ್ಸೆಲ್‌ಸಿ, ಫಾರ್ಮಸಿ, ಎಂಜಿನಿಯರಿಂಗ್‌ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಅವರು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಸಂಕಷ್ಟದಲ್ಲಿರುವುದರಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ತರಗತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಮಾನದಂಡ ಅನುಸರಿಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಬೇಕೆಂಬ ಎಂದು ಆಗ್ರಹಿಸಿದ್ದಾರೆ.

ದೇಶ ಹಾಗೂ ರಾಜ್ಯಾದ್ಯಂತ ಮಹಾಮಾರಿ ಕೋವಿಡ್-19 ವ್ಯಾಪಿಸುತ್ತಿದೆ. ಈ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಹಾಜರಾಗಿ ಅವರಲ್ಲಿ ಸೋಂಕು ಹರಡಿದರೆ ಮತ್ತಷ್ಟು ಆತಂಕ ಹೆಚ್ಚಾಗುತ್ತದೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕಾ ಮಾನದಂಡ ಅನುಸರಿಸಿ ತೇರ್ಗಡೆ ಮಾಡುವುದೇ ಸೂಕ್ತ ಎಂದು ಹೇಳಿದರು.

Also Read  ಜೀವನದ ಸಮಸ್ಯೆ ಹೆಚ್ಚಾಗಿದೆಯೇ? ನಿಮ್ಮ ರಾಶಿಗನುಗುಣವಾಗಿ ಈ ವಿಶೇಷ ಪರಿಹಾರ ಮಾಡಿ ಕಷ್ಟಗಳು ಪರಿಹಾರವಾಗುತ್ತದೆ

error: Content is protected !!
Scroll to Top