ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ➤ಜಿಲ್ಲಾಧಿಕಾರಿ ಜಿ. ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.8: ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸ ದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.

 

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ -66ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾಧ್ಯತೆೆಗಳಿದ್ದು, ಅಂತಹ ಸ್ಥಳಗಳನ್ನು ಕೂಡಲೇ ಗುರುತಿಸಿ ಹೆದ್ದಾರಿಯಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಹೆದ್ದಾರಿಯ ಬದಿಯಲ್ಲಿ ನಿರ್ಮಿಸಿರುವ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಕ್ರಮ ಕೈಗೊಳ್ಳಿ. ಅಗತ್ಯ ಇರುವೆಡೆಗಳಲ್ಲಿ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸುವಂತೆ ಹಾಗೂ ಹೆದ್ದಾರಿಯಲ್ಲಿ ಪಾಟ್ಹೋಲ್ ಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚುವಂತೆ ಅವರು ಸೂಚಿಸಿದರು. ಸಂಚಾರಿ ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚರಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಂತೆಕಟ್ಟೆಯ ಮಾರುಕಟ್ಟೆಯನ್ನು ಒಂದು ವಾರದ ಒಳಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Also Read  ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ

 

error: Content is protected !!
Scroll to Top