ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸದ್ಯಕ್ಕಿಲ್ಲ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ ,ಜೂ.8: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಜೂನ್ 8 ರಿಂದ ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಯಾವುದೇ ಸೇವೆಗಳಿಗೆ ಸರ್ಕಾರದ ಮುಂದಿನ ಆದೇಶದ ತನಕ ಅವಕಾಶವಿಲ್ಲ ಎಂದು ದೇವಳದ ಆಡಳಿತಾಧಿಕಾರಿ ಅಪರ ಜಿಲ್ಲಾಧಿಕಾರಿ ಎಂ.ಜೇ ರೂಪಾ ತಿಳಿಸಿದ್ದಾರೆ. ದೇವಾಲಯ ತೆರೆದಿದ್ದು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆದಿ ಸುಬ್ರಹ್ಮಣ್ಯ ದೇವರ ದರ್ಶನವನ್ನು ನೂರಾರು ಭಕ್ತರು ಪಡೆಯುತ್ತಿದ್ದಾರೆ.

 

ಭಕ್ತರಿಗೆ ಬೆಳ್ಳಗೆ 8.30 ರಿಂದ ಸಂಜೆ 5.30ರ ತನಕ ದರ್ಶನಕ್ಕೆ ಅವಕಾಶವಿದೆ. ದೇವಳದ ವಸತಿ ಗೃಹದಲ್ಲಿ ತಂಗಲು ಅವಕಾಶವಿಲ್ಲ. ಗಂಧ, ತೀರ್ಥ, ಮಂಗಳಾರತಿ ಪ್ರಸಾದ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಇಲ್ಲ. ದೇವಳದ ಮಂಭಾಗದಲ್ಲಿ ಕಡ್ಡಾಯವಾಗಿ ತಪಾಸಣೆ ಮಾಡಲಾಗುವುದು. ಒಳ ಪ್ರವೇಶಿಸುವಾಗ ಸ್ಯಾನಿಟೈಸರ್ ನೀಡಲಾಗುವುದು. ಇನ್ನು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಡ್ಡಾಯ. ದೇವಳದ ಗೋಡೆ, ಕಂಬಗಳನ್ನ ಮುಟ್ಟಲು ಅವಕಾಶವಿಲ್ಲ. 10 ವರ್ಷ ಕೆಳಗಿನ ಮಕ್ಕಳು ಹಾಗೂ 65 ವರ್ಷ ಮೇಲ್ಪಟ್ಟವರಿಗೆ ಅವಕಾಶವಿಲ್ಲ. ಗರ್ಭಿಣಿಯರಿಗೆ ದೇವಳ ಭೇಟಿ ನಿರ್ಬಂಧಿಸಲಾಗಿದೆ. ದೇವಲಯದ ಪ್ರಧಾನ ದ್ವಾರದಲ್ಲಿ ಹೆಸರು ಮತ್ತು ವಿಳಾಸ, ಮೊಬೈಲ್ ಸಂಖ್ಯೆ ನಮೂದಿಸಿ ಕೂಪನ್ ಕೊಡಲಾಗುವುದು ಎಂದು ದೇವಳದ ಆಡಳಿತಾಧಿಕಾರಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ತಿಳಿಸಿದ್ದಾರೆ.

 

Also Read  ಪಿಎಸ್‌ಐ ನೇಮಕಾತಿ ಹಗರಣ ➤ ಆರೋಪಿ ಹರೀಶ್‌ಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್

error: Content is protected !!
Scroll to Top