ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ➤ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶೋಪಿಯಾನ್,ಜೂ.8: ಜಮ್ಮು- ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಸದೆಬಡೆದಿದೆ. ಕಳೆದ 24 ಗಂಟೆಗಳಲ್ಲಿ ಒಂಭತ್ತು ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ.

 

ಇಂದು ಬೆಳಗ್ಗೆ ಶೋಪಿಯಾನ್ ಜಿಲ್ಲೆಯ ಪಿಂಜೋರಾ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಸೇನಾಪಡೆ ನಾಲ್ವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆ ಜಂಟಿಯಾಗಿ ಕಾರ್ಯಚರಣೆ ಆರಂಭಿಸಿದ್ದು, ಈ ಸಂದರ್ಭ ಸೇನಾಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣವೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆಯು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿ ತಿಳಿಸಿದೆ. ಶೋಪಿಯಾನ್ ಜಿಲ್ಲೆ ರೆಬಾನ್ ಎಂಬ ಪ್ರದೇಶದಲ್ಲಿ ಭಾನುವಾರವೂ ಕೂಡಾ ಎನ್ಕೌಂಟರ್ ನಡೆಸಿದ್ದ ಸೇನಾಪಡೆಯು ಐವರು ಉಗ್ರರನ್ನು ಹತ್ಯೆ ಮಾಡಿದ್ದರು.

Also Read  ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ

 

error: Content is protected !!
Scroll to Top