ದ.ಕ. ಜಿಲ್ಲಾ ಪೊಲೀಸ್ ವಿಶೇಷ ದಳದ ಎಎಸ್ಐ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಜೂ.9, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಶೇಷ ದಳದ ಎ.ಎಸ್.ಐ. ಧನಂಜಯ ಅವರು ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.

ವಿಟ್ಲ, ಬಿಸಿರೋಡ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಮಂಗಳೂರು ಜಿಲ್ಲಾ ಪೊಲೀಸ್ ವಿಶೇಷ ದಳದಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಎದೆನೋವಿನಿಂದ ಬಳಲುತ್ತಿದ್ದ ಅವರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆನ್ನಲಾಗಿದೆ.

 

Scroll to Top