ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ,ಜೂ.8: ಕರ್ನಾಟಕ ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.ದೇವಾಲಯಕ್ಕೆ ಆಗಮಿಸಿದ ಬೊಮ್ಮಾಯಿ ಅವರು ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

 

ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವರಿಗೆ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿದ್ದರು.

Also Read  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.!➤ಪ್ರಕರಣ ದಾಖಲು

 

 

 

error: Content is protected !!
Scroll to Top