(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ.10, ಯುವಕನೋರ್ವ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮುಳ್ಳು ಹಂದಿ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದಿದೆ.
ದಾಳಿಗೊಳಗಾದ ಯುವಕನನ್ನು ಶಫೀಕ್ (16) ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಸ್ನೇಹಿತನ ಜತೆ ಸಾಲೆತ್ತೂರಿನಿಂದ ಕರೈಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆನ್ನಲಾಗಿದೆ.