ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ – News Kadaba

ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಮೈಸೂರು,ಸೆ.03, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಬಳಿ ಆದಿತ್ಯವಾರ ನಡೆದಿದೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಮೇಲೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲೆಯ ಚಂದಕವಾಡಿ ಗ್ರಾಮದ ಮಹದೇವಸ್ವಾಮಿ(38), ರತ್ನಮ್ಮ(43) ಹಾಗೂ ದಿಶಾ(8) ಎಂಬುವುದಾಗಿ ಗುರುತಿಸಲಾಗಿದೆ.

ನರಸೀಪುರ ಕಡೆಯಿಂದ ಮೈಸೂರಿಗೆ ಹೋಗುತ್ತಿದ್ದ ಖಾಸಗಿ ಬಸ್, ಹಾಗೂ ಮೈಸೂರು ಕಡೆ ಬರುತ್ತಿದ್ದ ಕಾರ್ ಸಂದರ್ಭದಲ್ಲಿ ಈ ಅವಘಡ ಸಂಭವಿದೆ. ಗಾಯಾಳುಗಳನ್ನು ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top