(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.10: ಈಗಾಗಲೇ ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ. ಗುಡುಗು ಮಿಂಚಿನ ಆರ್ಭಟವೂ ಹೆಚ್ಚಾಗುತ್ತಿದೆ.ಕಳೆದ ಕೆಲ ದಿನಗಳ ಹಿಂದೆ ನಿಸರ್ಗ ಚಂಡ ಮಾರುತದ ಬಳಿಕ ಕರಾವಳಿಯಲ್ಲಿ ಮುಂಗಾರು ಕಣ್ಣ ಮುಚ್ಚಾಲೆ ಆಡುತ್ತಿದೆ.
ಕರಾವಳಿಯಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ. ಇಂದು ಬೆಳಗ್ಗೆಯಿಂದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ.
ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆ ಬಿರುಸುಗೊಂಡಿದ್ದು ಗುಡುಗು-ಸಿಡಿಲಿನ ಜೊತೆಗೆ ಮಳೆಯಾಗುತ್ತಿದೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ,ಬಂಟ್ವಾಳ ತಾಲೂಕಿನ ಹಲವೆಡೆ ಕೂಡ ಭಾರಿ ಮಳೆಯಾದ ಬಗ್ಗೆ ವರದಿಯಾಗಿದೆ. ಇನ್ನು ಕೃಷ್ಣ ನಗರಿ ಉಡುಪಿಯಲ್ಲೂ ಭಾರಿ ಮಳೆಯಾಗುತ್ತಿದೆ. ಇಂದು ಮುಂಜಾನೆಯಿಂದಲೇ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.