ಕಡಬದ ಆಶಾ ಕಾರ್ಯಕರ್ತೆ ನಾಪತ್ತೆ ➤ ಕರುಳ ಕುಡಿಗಳ ಆಕ್ರಂದನ

(ನ್ಯೂಸ್ ಕಡಬ) newskadaba.com ಕಡಬ,ಜೂ.10: ಆಶಾ ಕಾರ್ಯಕರ್ತೆಯೋರ್ವರು ತನ್ನಿಬ್ಬರು ಮಕ್ಕಳನ್ನು ಮನೆಯಲ್ಲೇ ಬಿಟ್ಟು ನಾಪತ್ತೆಯಾದ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕಿನ ಐತ್ತೂರು ಗ್ರಾಮದ ಆಶಾ ಕಾರ್ಯಕರ್ತೆ ಸೌಮ್ಯಾ ಸೋಮವಾರದಂದು ಮಂಗಳೂರು ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿಯನ್ನು ಆತಂಕಕ್ಕೆ ಒಳಪಡಿಸಿದೆ. ಇತ್ತ ತನ್ನಿಬ್ಬರು ಕರುಳ ಕುಡಿಗಳನ್ನು ಮನೆಯಲ್ಲೇ ಬಿಟ್ಟು ತೆರಳಿರುವ ಸೌಮ್ಯಾರ ಆಗಮನಕ್ಕಾಗಿ ಮಕ್ಕಳು ಕಾಯುತ್ತಿದ್ದಾರೆ. ಈ ಬಗ್ಗೆ ಆಕೆಯ ಪತಿ ಅನೂಪ್, ಬುಧವಾರದಂದು ಕಡಬ ಠಾಣೆಗೆ ದೂರು ನೀಡಿದ್ದಾರೆ.

Also Read  ಮಂಗಳೂರು: ಸರಣಿ ಅಪಘಾತ- 10ಕ್ಕೂ ಹೆಚ್ಚು ವಾಹನಗಳಿಗೆ ಹಾನಿ

 

error: Content is protected !!
Scroll to Top