ಕಡಬ ಬಿಜೆಪಿ ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ಗಿರೀಶ್ ಎ.ಪಿ., ಕಾರ್ಯದರ್ಶಿಯಾಗಿ ಮಧುಸೂದನ್ ಕೊಂಬಾರು

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಕಡಬ ಬಿಜೆಪಿ ಮಹಾ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಗಿರೀಶ್ ಎ.ಪಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಧುಸೂದನ್ ಕೊಂಬಾರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ನಿಕಟ ಪೂರ್ವ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಪ್ರಕಾಶ್ ಎನ್.ಕೆ., ಸತೀಶ್ ನಾಯಕ್, ಎ.ಬಿ. ಮನೋಹರ ರೈ ಮೊದಲಾದವರು ಉಪಸ್ಥಿತರಿದ್ದರು.

 

Scroll to Top