ಡಿಕೆಶಿ ಪದಗ್ರಹಣಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಿಲ್

ಬೆಂಗಳೂರು, ಜೂ.11: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಸರಕಾರ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಪದಗ್ರಹಣದ ದಿನಾಂಕವನ್ನು ಪಕ್ಷದ ಹಿರಿಯಲ್ಲಿ ಚರ್ಚಿಸಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪದಗ್ರಹಣ ಕಾರ್ಯಕ್ರಮದ ಕುರಿತಂತೆ ಮುಖ್ಯಮಂತ್ರಿ ಮಾತನಾಡಿರೋದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಸ್ವಾಗತ ಮಾಡುತ್ತೇನೆ ಎಂದರು.

ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ದೇಶದಲ್ಲಿ ವಿರೋಧ ಪಕ್ಷಗಳು ಕೂಡ ಇರಬೇಕು ಎಂದು ಅವರು ಹೇಳಿದ್ದಾರೆ ಎಂದರು.

Scroll to Top