ರಾಜ್ಯದಲ್ಲಿ ಕೊರೋನ ಸೋಂಕಿಗೆ ಮೂವರು ಬಲಿ: 204 ಮಂದಿಗೆ ಸೋಂಕು ದೃಢ

ಬೆಂಗಳೂರು, ಜೂ.11: ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72ಕ್ಕೇರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಸೆಸೆಲ್ಸಿ ವಿದ್ಯಾರ್ಥಿ ಸೇರಿದಂತೆ 204 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಗುರುವಾರ 114 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 2,976ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2,976 ಸಕ್ರಿಯ ಪ್ರಕರಣಗಳಿದ್ದು, 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಪತ್ತೆಯಾದ 204 ಸೋಂಕಿತರ ಪೈಕಿ 157 ಮಂದಿ ಹೊರರಾಜ್ಯದಿಂದ ಬಂದವರಾಗಿದ್ದಾರೆ.

Also Read  ಶೀಘ್ರದಲ್ಲಿ ಸುಸಜ್ಜಿತ ರಂಗ ಮಂದಿರ ನಿರ್ಮಾಣ ಕಾಮಗಾರಿ ➤ ಶಾಸಕ ಡಾ. ವೈ ಭರತ್ ಶೆಟ್ಟಿ

ಯಾದಗಿರಿಯಲ್ಲಿ 66, ಉಡುಪಿಯಲ್ಲಿ 22, ಬೆಂಗಳೂರು ನಗರದಲ್ಲಿ 17, ಕಲಬುರಗಿಯಲ್ಲಿ 16, ರಾಯಚೂರಿನಲ್ಲಿ 15, ಬೀದರ್‌ನಲ್ಲಿ 14, ಶಿವಮೊಗ್ಗದಲ್ಲಿ 10, ದಾವಣಗೆರೆಯಲ್ಲಿ 9, ಕೋಲಾರದಲ್ಲಿ 6, ಮೈಸೂರು, ರಾಮನಗರದಲ್ಲಿ ತಲಾ 5, ವಿಜಯಪುರದಲ್ಲಿ 4, ಬಾಗಲಕೋಟೆ, ಉತ್ತರಕನ್ನಡದಲ್ಲಿ ತಲಾ 3, ದಕ್ಷಿಣ ಕನ್ನಡ, ಹಾಸನ, ಧಾರವಾಡದಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಪ್ಪಳದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಪ್ರಕಟನೆ ತಿಳಿಸಿದೆ.

error: Content is protected !!
Scroll to Top