ಪಾಕಿಸ್ತಾನ ಝಿಂದಾಬಾದ್ ಘೋಷಣೆ ಪ್ರಕರಣ : ಅಮೂಲ್ಯಗೆ ಜಾಮೀನು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ. 12, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿ ಕಾರಾಗೃಹ ಸೇರಿದ್ದ ಅಮೂಲ್ಯ ಲಿಯೋನ್‍ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಅಮೂಲ್ಯ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಜಾಮೀನು ಮಂಜೂರು ಮಾಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲರು, ಅರ್ಜಿದಾರರಾದ ಅಮೂಲ್ಯ ಇನ್ನೂ 19 ವರ್ಷ ವಯಸ್ಸಿನ ಯುವತಿ, ನಗರದ ಖಾಸಗಿ ಕಾಲೇಜು ಒಂದರಲ್ಲಿ ಓದುತ್ತಿದ್ದಾರೆ. ಅವರು ಪಾಕಿಸ್ತಾನ ಝಿಂದಾಬಾದ್ ಎಂದಷ್ಟೇ ಕೂಗಿದ್ದಾರೆ. ಪಾಕಿಸ್ತಾನವನ್ನು ನಮ್ಮ ದೇಶ ಎಂದು ಎಲ್ಲಿಯೂ ಉಲ್ಲೇಖಿಸಿಲ್ಲ ಮತ್ತು ಘೋಷಣೆ ಮಾಡಿಲ್ಲ. ಹೀಗಾಗಿ, ಜಾಮೀನು ನೀಡಬೇಕೆಂದು ಮನವಿ ಮಾಡಿದರು.

Also Read  ಚಿರಂಜೀವಿ ಸಹೋದರನ ಮಗಳ ದಾಂಪತ್ಯದಲ್ಲಿ ಬಿರುಕು

error: Content is protected !!
Scroll to Top