ಮಂಗಳೂರು: ನಿವೃತ್ತ ನ್ಯಾಯಮೂರ್ತಿ ಸುರೇಶ್ ಹೊಸಬೆಟ್ಟು ನಿಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.12, ಮುಂಬೈ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೊಸಬೆಟ್ಟು ಸುರೇಶ್ (90) ಮುಂಬೈನಲ್ಲಿ ಇಂದು ನಿಧನರಾಗಿದ್ದಾರೆ. ಸುರತ್ಕಲ್ ಮೂಲದ ಹೊಸಬೆಟ್ಟುವಿನರಾದ ನ್ಯಾ. ಸುರೇಶ್ ಅವರು ಪ್ರಸ್ತುತ ಮುಂಬೈನಲ್ಲಿಯೇ ನೆಲೆಸಿದ್ದರು.

ಸುರತ್ಕಲ್ ಹೊಸಬೆಟ್ಟುವಿನಲ್ಲಿ 1929ರ ಜುಲೈ 29ರಂದು ಜನಿಸಿದ್ದ ಹೊಸಬೆಟ್ಟು ಸುರೇಶ್ 1953ರಲ್ಲಿ ಮುಂಬೈ ಹೈಕೋರ್ಟ್‌ನಲ್ಲಿ ನ್ಯಾಯವಾದಿಯಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಮಂಗಳೂರಿನಲ್ಲಿ ಬಿಎ ಪದವಿ ಮತ್ತು ಬೆಳಗಾಂನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ಎಂಎ ಪದವಿ ಪಡೆದು ಮುಂಬೈ ವಿಶ್ವವಿದ್ಯಾನಿಲಯದಲ್ಲಿ ಎಲ್‌ಎಲ್‌ಎಂ ಪದವಿ ಪಡೆದಿದ್ದರು. 1968ರಲ್ಲಿ ಗ್ರೇಟರ್ ಬಾಂಬೆ ಸಿಟಿ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. 1979ರಲ್ಲಿ ದ್ವಿತೀಯ ಹೆಚ್ಚುವರಿ ಪ್ರಧಾನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. 1980ರ ಜೂನ್ 23ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಅವರು ಬಳಿಕ ಬಾಂಬೆ ಹೈಕೋರ್ಟ್ ನಲ್ಲಿ ನ್ಯಾಯವಾದಿಯಾಗಿ ಪ್ರಾಕ್ಟೀಸು ಆರಂಭಿಸಿ, 1982ರಲ್ಲಿ ಹೈಕೋರ್ಟ್‌ನ ಹಿರಿಯ ನ್ಯಾಯವಾದಿಯಾಗಿ ಪದೋನ್ನತಿ ಪಡೆದಿದ್ದರು. 1991ರ ಜುಲೈ 19ರಂದು ಅವರು ಹೈಕೋರ್ಟ್ ನಿಂದ ವೃತ್ತಿ ನಿವೃತ್ತಿ ಪಡೆದಿದ್ದರು.

Also Read  ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ ➤ ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ

ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಆಗಲಿದ್ದಾರೆ.

error: Content is protected !!
Scroll to Top