ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣಾಧಿಕಾರಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜೂ.13:ವಿದ್ಯಾರ್ಥಿಗಳಿಂದ ಬೋಧನಾ ಶುಲ್ಕ ಪಡೆಯುವ ಕುರಿತು ಶುಲ್ಕ ಪಾವತಿಸಲು ನಿರಾಕರಿಸುವ ಪೋಷಕರಿಗೆ ಮುಂದಿನ ಆದೇಶದವರೆಗೆ ಯಾವುದೇ ರೀತಿಯ ಒತ್ತಡ ಹೇರಬಾರದು. ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ದೂರುಗಳು ಬಂದರೆ ಅಂತಹ ಶಾಲೆಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಾಸಗಿ ಶಾಲೆಗಳಿಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಚ್ಚರಿಕೆ ನೀಡಿದ್ದಾರೆ.


ಇತ್ತೀಚೆಗೆ ಶುಲ್ಕ ಪಾವತಿಗೆ ಸಂಬಂಧಪಟ್ಟಂತೆ ಖಾಸಗಿ ಶಾಲೆಗಳು ಒತ್ತಡ ಹೇರುತ್ತಿರುವ ಬಗ್ಗೆ ಆರೋಪಗಳು ಬರುತ್ತಿವೆ. ಈ ಸಂಬಂಧ ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶಾಲಾ ಶುಲ್ಕ ವಸೂಲಾತಿ ಕುರಿತಂತೆ ಯಾವುದೇ ವಿದ್ಯಾರ್ಥಿ ಪೋಷಕರಿಗೆ ಒತ್ತಡ ಹೇರುವಂತಿಲ್ಲ ಒಂದು ವೇಳೆ ಈ ಕುರಿತು ದೂರು ದಾಖಲಾದಲ್ಲಿ ಅಂತಹ ಶಾಲೆಗಳ ವಿರುದ್ದ ಶಿಕ್ಷಣ ಹಕ್ಕು ಕಾಯಿದೆಯಡಿ ಶಿಸ್ತು ಕ್ರಮ ಜರುಗಿಸಲಾಗುವುದು ಹಾಗೂ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರಕ್ಕೆ ವರದಿ ಮಾಡಲಾಗುವುದು ಎಂದು ಹೇಳಿದ್ದಾರೆ.

Also Read  ಮಾಜಿ ಸೈನಿಕರಿಗೆ ಉದ್ಯೋಗ ಮೇಳ

error: Content is protected !!
Scroll to Top