ಕಡಬ: ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ 12 ಮಂದಿಯ ವರದಿ ನೆಗೆಟಿವ್

(ನ್ಯೂಸ್ ಕಡಬ)newskadaba.com ಕಡಬ. ಜೂ.13, ಕಡಬದ ವ್ಯಕ್ತಿಯೋರ್ವರಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಆ ವ್ಯಕ್ತಿಯನ್ನು ಸಂಪರ್ಕಿಸಿದರೆನ್ನಲಾದ ಒಟ್ಟು 23 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಈಗಾಗಲೇ 12 ಜನರ ವರದಿ ನೆಗೆಟಿವ್ ಬಂದಿದ್ದು, ಇನ್ನುಳಿದ 11 ಜನರ ವರದಿ ಇನ್ನಷ್ಟೇ ಬರಬೇಕಿದೆ.

ಕಡಬ ಮೂಲದ ವ್ಯಕ್ತಿ ಸೋಂಕು ಪೀಡಿತರಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನು ಅವರು ಜೂ.19ರವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ. ಅಲ್ಲದೇ ಅವರು ಸಂಪರ್ಕಿಸಿದರೆನ್ನಲಾದ ಅವರ ಮನೆಯವರು ಸೇರಿದಂತೆ ಒಟ್ಟು 23 ಜನರ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು, ಇದರಲ್ಲಿ 12 ಜನರ ವರದಿ ಬಂದಿದ್ದು ಎಲ್ಲ 12 ವರದಿಗಳು ನೆಗೆಟಿವ್ ಬಂದಿದೆ. ಇನ್ನುಳಿದ 11 ಜನರ ವರದಿ ಬರಬೇಕಷ್ಟೆ ಎಂದು ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್, ಕಂದಾಯ ನಿರೀಕ್ಷಕ ಅವಿನ್ ರಂಗತ್ ಮಲೆ ತಿಳಿಸಿದ್ದಾರೆ.

Also Read  ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಪತ್ತೆಗೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ➤‌ ಆಸ್ತಿ ಮುಟ್ಟುಗೋಲಿಗೆ ಚಿಂತನೆ

error: Content is protected !!
Scroll to Top