(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ 13: ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಕೃಷ್ಣಾಪುರ ಎಂಬಲ್ಲಿನ ಶನಿವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ತಾರನಾಥ್ ಎಂಬವರ ಪುತ್ರ ಸಂತೋಷ್(20) ಎಂದು ಗುರುತಿಸಲಾಗಿದೆ. ಸಂತೋಷ್ ಸ್ನೇಹಿತರ ಜೊತೆ ಇಂದು ಮಧ್ಯಾಹ್ನ ಕೃಷ್ಣಾಪುರ ಬಳಿಯ ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.