ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಇಲ್ಲ ಡಾ.ಕೆ.ಸುಧಾಕರ್

ನ್ಯೂಸ್ ಕಡಬ) newskadaba.com.ಕಲಬುರ್ಗಿ,ಜೂ.14:ರಾಜ್ಯದಲ್ಲಿ ಮತ್ತೆ ಲಾಕ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ.


ಕಲಬುರ್ಗಿಯ ಜೆಮ್ಸ್ ವೈದ್ಯಕೀಯ ಕಾಲೇಜಿಗೆ ಇಂದು ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್‍ವೈ ಅವರೊಂದಿಗೆ ಮಾತನಾಡಲಿದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆಯಿಲ್ಲ. ಸರಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ.


ಪ್ರಸ್ತುತ ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದವರನ್ನು ಮಾತ್ರವೇ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ರೋಗದ ಲಕ್ಷಣ ಇಲ್ಲದಿದ್ದರೆ ಅವರಿಂದ ಸೋಂಕು ಹರಡುವುದು ಕಡಿಮೆ ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಸ್ಪಷ್ಟಪಡಿಸಿದೆ ಎಂದರು.

Also Read  ಮಂಗಳೂರು: ಕಳೆದುಹೋದ ಮೊಬೈಲ್ ಪತ್ತೆಗಾಗಿ ವಾಟ್ಸಪ್ ಸಹಾಯ ವಾಣಿ

error: Content is protected !!
Scroll to Top