ಟಿಕ್-ಟಾಕ್ ಅವಾಂತರ ➤ ಜೀವಂತ ಮೀನು ನುಂಗಿ ಯುವಕ ದುರ್ಮರಣ



(ನ್ಯೂಸ್ ಕಡಬ)newskadaba.com ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಜೀವಂತ ಮೀನು ನುಂಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದಿದೆ.





ಮೃತ ಯುವಕನನ್ನು ಹೊಸೂರಿನ ಪಾರ್ವತಿ ನಗರದ ನಿವಾಸಿ ವೆಟ್ರಿವೆಲ್ (22) ಎಂದು ಗುರುತಿಸಲಾಗಿದೆ. ಇವರು ತನ್ನ ಇಬ್ಬರು ಸ್ನೇಹಿತರ ಜೊತೆ ಕೆರೆಗೆ ಮೀನು ಹಿಡಿಯಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.






ಮೃತ ವೆಟ್ರಿವೆಲ್ ಮತ್ತು ಆತನ ಇಬ್ಬರು ಸ್ನೇಹಿತರು ಮದ್ಯಪಾನ ಮಾಡಿದ್ದರು. ಈ ವೇಳೆ ವೆಟ್ರಿವೆಲ್ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಟಿಕ್‍ಟಾಕ್ ವಿಡಿಯೋ ರೆಕಾರ್ಡ್ ಮಾಡುತ್ತಿದ್ದನು. ಆಗ ಜೀವಂತ ಮೀನನ್ನು ನುಂಗಿದ್ದಾನೆ. ಆದರೆ ಮೀನು ಆತನ ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ವೆಟ್ರಿವೆಲ್ ಉಸಿರಾಡಲು ಸಾಧ್ಯವಾಗದೇ ಒದ್ದಾಡಿದ್ದಾನೆ ಎಂದು ಹೊಸೂರು ಪಟ್ಟಣ ಪೊಲೀಸ್ ಠಾಣಾ ಅಧಿಕಾರಿ ಹೇಳಿದ್ದಾರೆ.
ಈ ವೇಳೆ ಸ್ನೇಹಿತರು ವೆಟ್ರಿವೆಲ್ ಗಂಟಲಿನಲ್ಲಿ ಸಿಲುಕಿದ್ದ ಮೀನು ತೆಗೆಯಲು ಪ್ರಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ, ಕೊನೆಗೆ ಕೂಡಲೇ ಆತನನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಯಲ್ಲಿ ಸತ್ತ ಮೀನನ್ನು ಆತನ ಗಂಟಲಿನಿಂದ ಹೊರತೆಗೆಯಲಾಗಿದೆ.

error: Content is protected !!
Scroll to Top