ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪೊಂಛ್,ಜೂ.14: ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೊಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ, ಮೃತಪಟ್ಟ ಸೈನಿಕರಲ್ಲಿ ಇವರು ಮೂರನೇಯವರಾಗಿದ್ದಾರೆ. ಷಹಪುರ್ – ಕರ್ನಿ ಸೆಕ್ಟರ್ ನ ಗಡಿಯುದ್ದಕ್ಕೂ ಶನಿವಾರ ರಾತ್ರಿ ಪಾಕಿಸ್ತಾನ ಸೈನಿಕರು ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದು, ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.  ಪಾಕಿಸ್ತಾನ ಸೈನಿಕರು ನಡೆಸಿದ ದಾಳಿಯಲ್ಲಿ ಗಾಯಗೊಂಡಿದ್ದ ಮೂವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಗಾಯಾಳುಗಳ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ರಜೌರಿ ಜಿಲ್ಲೆಯಲ್ಲಿ ಜೂನ್ 4 ರಂದು ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಹವಲ್ದಾರ್ ಪಿ. ಮಥಿಯಾಜಗನ್ ಎಂಬವರು ಹುತಾತ್ಮರಾಗಿದ್ದರು. ಜೂನ್ 10 ರಂದು ನಾಯಕ್ ಗುರುಚರಣ್ ಸಿಂಗ್ ಪ್ರಾಣತೆತ್ತಿದ್ದರು.

Also Read  ಯುವನಿಧಿ ಯೋಜನೆ- ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

error: Content is protected !!
Scroll to Top