ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಬೈ,ಜೂ.14: ಧೋನಿ ಸಿನಿಮಾ ಖ್ಯಾತಿಯ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.ಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ರೂಮಿನಲ್ಲಿ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ. ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಪ್ರಾಜೆಕ್ಟ್ ಸಿಗದೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಖಾಸಗಿ ವಾಹಿನಿಯ ‘ಪವಿತ್ರ ರಿಶ್ತಾ’ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್ ಸಿಂಗ್, ಬಳಿಕ ‘ಕೈ ಪೋ ಚೇ’ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ತದನಂತರ ಬಿಡುಗಡೆಯಾಗಿದ್ದ ‘ಶುದ್ಧ್ ದೇಶಿ ರೊಮ್ಯಾನ್ಸ್’ ಸಿನಿಮಾದ ನಟನೆ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು.

Also Read  ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ ➤ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ


ಖಾಸಗಿ ವಾಹಿನಿಯ ”ಪವಿತ್ರ ರಿಶ್ತಾ” ಧಾರಾವಾಹಿ ಮೂಲಕ ಚಿರಪರಿಚಿತರಾದ ಸುಶಾಂತ್, ”ಶುದ್ಧ್ ದೇಶಿ ರೊಮ್ಯಾನ್ಸ್”’, ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಸಿನಿಮಾದಲ್ಲಿ ನಟಿಸಿದ್ದಾರೆ. ಬಳಿಕ ರಾಬ್ತಾ, ಕೇದಾರ್ ನಾಥ್, ಮುಂತಾದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಇವರು ಕೊನೆಯದಾಗಿ ಚಿಚ್ಚೋರೆ ಸಿನಿಮಾದಲ್ಲಿ ಮಿಂಚಿದ್ದರು.

error: Content is protected !!
Scroll to Top