ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್

(ನ್ಯೂಸ್ ಕಡಬ) newskadaba.com ತಮಿಳುನಾಡು,ಜೂ.15: ತಮಿಳುನಾಡು ಸರ್ಕಾರ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು 4 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಜೂನ್ 19ರಿಂದ 30ರ ತನಕ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿರುತ್ತದೆ.

ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್‌ಪಟ್ಟು‌ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ತಮಿಳುನಾಡು ಸರ್ಕಾರ ಸೋಮವಾರ ಈ ಕುರಿತು ಆದೇಶ ಹೊರಡಿಸಿದೆ. ಅಗತ್ಯ ಸೇವೆಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದಾಗಿದೆ. ಈ ನಾಲ್ಕು ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ತನಕ ಮಾತ್ರ ಅಂಗಡಿಗಳನ್ನು ತೆರೆಯಬಹುದಾಗಿದೆ ಎಂದು ಸರ್ಕಾರ ಹೇಳಿದೆ. ಪೊಲೀಸರು ತಂಡಗಳನ್ನು ರಚನೆ ಮಾಡಿಕೊಂಡು ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದಾರೆ. ತಮಿಳುನಾಡಿನಲ್ಲಿ ಪ್ರಸ್ತುತ ಕೋವಿಡ್ – 19 ಸೋಂಕಿತರ ಸಂಖ್ಯೆ 44,661. ಚೆನ್ನೈ ನಗರದಲ್ಲಿ 31,896 ಪ್ರಕರಣಗಳಿವೆ. ಕೊರೊನಾ ವೈರಸ್ ಸೋಂಕು ಹೆಚ್ಚಿರುವ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

Also Read  ಸರ್ಕಾರ ಸುಭದ್ರವಾಗಿದೆ, ಮುಂದಿನ ಮೂರು ವರ್ಷವೂ ಯಡಿಯೂರಪ್ಪನವರೇ ಸಿಎಂ ➤ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್

 

error: Content is protected !!
Scroll to Top