ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗಲ್ಲ➤ ಮುಂದಿನ ದಿನದಲ್ಲಿ ಮತ್ತಷ್ಟು ಸಡಿಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.15:  ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ವಾರದಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಇಂತಹ ಯಾವುದೇ ಯೋಜನೆಯೂ ಸರ್ಕಾರದ ಮುಂದೆ ಇಲ್ಲ ಎಂದರು.

 

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಯಲಿರುವ ವಿಡಿಯೋ ಸಂವಾದಲ್ಲೂ ಈ ಮನವಿಯನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮತ್ತೆ ಜಾರಿಗೊಳಿಸಲಾಗುತ್ತದೆ ಎಂಬ ಹೇಳಲಾಗುತಿತ್ತು. ಆದರೆ ಬಿಎಸ್‌ವೈ ಈ ಊಹಾಪೋಹವನ್ನು ನಿರಾಕರಿಸಿದ್ದಾರೆ. ಆದರೆ ಜನರು ಎಚ್ಚರಿಕೆಯಿಂದ ಇರಬೇಕು. ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

Also Read  ರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್ !

error: Content is protected !!
Scroll to Top