ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ಅಣ್ಣ- ತಂಗಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ,ಜೂ.16: ಅನಾರೋಗ್ಯ ದಿಂದ ಬಳಲುತ್ತಿದ್ದ ಅವಿವಾಹಿತ ಅಣ್ಣ- ತಂಗಿ ಇಬ್ಬರು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೆ ಶರಣಾದ ಹೃದಯ ವಿದ್ರಾವಕ ಘಟನೆ, ಸೋಮವಾರ ತಡರಾತ್ರಿ ಬಂಟ್ವಾಳದ ಸಂಗಬೆಟ್ಟು ಎಂಬಲ್ಲಿ ನಡೆದಿದೆ.


30 ವರ್ಷಗಳಿಂದ ಮಾನಸಿಕ ವಾಗಿ ಖಿನ್ನತೆಗೊಳಗಾಗಿದ್ದ ತಂಗಿ – ಅನಾರೋಗ್ಯ ದಿಂದ ಬಳಲುತ್ತಿದ್ದ ಅಣ್ಣ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೈದವರನ್ನು ನೀಲಯ್ಯ ಶೆಟ್ಟಿ ಗಾರ್ (42) , ಕೇಸರಿ ( 39) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು ಅನಾರೋಗ್ಯ ದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಕೃತ್ಯ ಗೈದಿದ್ದಾರೆ ಎಂದು ತಿಳಿದುಬಂದಿದೆ.
ಮನೆಯಲ್ಲಿ ನೀಲಯ್ಯ ಅವರ ಮತ್ತೊಬ್ಬ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಇವರೆಲ್ಲಾ ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ಇದ್ದಕ್ಕಿಂದಂತೆ ಕಿರುಚಿದ ಶಬ್ದ ಕೇಳಿ ಮನೆಮಂದಿ ಎಚ್ಚರಗೊಂಡು ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು. . ಬಳಿಕ ಸ್ಥಳೀಯರು ಸೇರಿ ಗಂಭೀರ ಗಾಯಗೊಂಡ ಇಬ್ಬರನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಗೆ ಸಾಗಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ, ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

Also Read  ಇಂದಿನಿಂದ ಬೆಂಗರೆ ವೀರಭಾರತಿ ವ್ಯಾಯಾಮ ಶಾಲೆಯ 93ನೇ ವಾರ್ಷಿಕೋತ್ಸವ ಪುರುಷ,ಮಹಿಳೆಯರ ಕುಸ್ತಿ ಪಂದ್ಯಾಟ, ಶ್ರೀಪಟ್ಟಾಭಿರಾಮ ದೇವರ ಬೆಳ್ಳಿಬಿಂಬ ಸ್ಥಾಪನೆ

 

 

error: Content is protected !!
Scroll to Top