ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

(ನ್ಯೂಸ್ ಕಡಬ)newskadaba.com ಜಮ್ಮು- ಕಾಶ‍್ಮೀರ. ಶೋಪಿಯಾನ್ ಪ್ರದೇಶದ ಗ್ರಾಮವೊಂದರಲ್ಲಿ ಇಂದು ಸೇನಾ ಪಡೆ, ಪೊಲೀಸ್ ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆಯ ಮೂಲಕ ಮೂವರು ಉಗ್ರರನ್ನು ಎನ್ ಕೌಂಟರ್ ಮೂಲಕ ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.

ಟುರ್ಕು ವಂಗಮ್ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದರು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಸ್ಥಳದಿಂದ ಏಕೆ-47, ಐಎನ್ ಎಸ್ ಎಎಸ್ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನೂ ಮೂವರು ಉಗ್ರರು ಅಡಗಿರುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ನಡೆದ ನಾಲ್ಕನೇ ಎನ್ ಕೌಂಟರ್ ಇದಾಗಿದ್ದು, ಈ ಸಮಯದಲ್ಲಿ ಸುಮಾರು 19 ಉಗ್ರರನ್ನು ಹೊಡೆದುರುಳಿಸಲಾಗಿತ್ತು.

Also Read  ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ!

error: Content is protected !!
Scroll to Top