ಮಂಗಳೂರು: ಕೇಂದ್ರ ಸರಕಾರದ ವಿರುದ್ದ ಸಿಪಿಎಂನಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.16, ಕೋವಿಡ್ -19 ನಿಗ್ರಹದಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಿಪಿಎಂ ಮಂಗಳವಾರ ದ.ಕ.ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿತು.

ಆಹಾರ ಧಾನ್ಯಗಳ ವಿತರಣೆ, ನೇರ ನಗದು ವರ್ಗಾವಣೆ, ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆ ವಿಸ್ತರಣೆ, ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಯ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್,
ಮತ್ತು ಜೆ. ಬಾಲಕೃಷ್ಣ ಶೆಟ್ಟಿ ಹಾಗೂ ಮುಖಂಡರಾದ
ದಯಾನಂದ ಶೆಟ್ಟಿ, ಸಂತೋಷ್ ಬಜಾಲ್, ಜಯಂತಿ ಬಿ ಶೆಟ್ಟಿ, ಭಾರತಿ ಬೋಳಾರ್, ಸುರೇಶ್ ಬಜಾಲ್, ಬಾಬು ದೇವಾಡಿಗ, ನವೀನ್ ಕೊಂಚಾಡಿ ಮುಂತಾದವರು ಪಾಲ್ಗೊಂಡಿದ್ದರು.

Also Read  ಮಂಗಳೂರು: ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ

error: Content is protected !!
Scroll to Top