ಬೆಂಗಳೂರು, ಜೂ.16: ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7530ಕ್ಕೇರಿಕೆಯಾಗಿದೆ.
ದಕ್ಷಿಣ ಕನ್ನಡ 79, ಕಲಬುರಗಿ 63, ಬಳ್ಳಾರಿ 53 ,ಬೆಂಗಳೂರು ನಗರ 47 ಪ್ರಕರಣಗಳು ದೃಢಪಟ್ಟಿವೆ.
ರಾಜ್ಯದಲ್ಲಿಂದು ಸೋಂಕಿನ ಕಾರಣದಿಂದ 7 ಮಂದಿ ಸಾವನ್ನಪ್ಪಿದ್ದಾರೆ. 322 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 2,976 ಸಕ್ರಿಯ ಸೋಂಕು ಪ್ರಕರಣಗಳಿವೆ.