ಲಾರಿ – ಸ್ಕೂಟರ್ ಢಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ. 17, ಲಾರಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮೃತರನ್ನು ಪೂಂಜರಕೋಡಿ ನಿವಾಸಿ ರಿತೇಶ್ (30) ಎಂದು ಗುರುತಿಸಲಾಗಿದೆ. ಬಿಸಿರೋಡಿನ ಸರ್ಕಲ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಇವರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ ಸಂಭವಿಸಿದ್ದು, ತಕ್ಷಣವೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕೂಡ ತಲೆಗೆ ಗಂಭೀರ ಗಾಯವಾದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Also Read  ಸುಬ್ರಹ್ಮಣ್ಯ: ನದಿ ನೀರಿನಲ್ಲಿ ತೇಲಿ ಬಂತು ಆನೆಯ ಮೃತದೇಹ

error: Content is protected !!
Scroll to Top