ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಜುಲೈ 1ರಂದು ಭೂಮಿ ಪೂಜೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಲಖನೌ, ಜೂ.17, ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಸಮಯ ಕೂಡಿ ಬಂದಿದ್ದು, ಇದೇ ಜುಲೈ 1ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆಯೆನ್ನಲಾಗಿದೆ.

ಕೊರೋನಾ ಲಾಕ್ ಡೌನ್ ನಿಂದಾಗಿ ಮುಂದೂಡಲಾಗಿದ್ದ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯ ಕಾರ್ಯಕ್ಕೆ ಅಂತಿಮವಾಗಿ ಮಹೂರ್ತ ಕೂಡಿ ಬಂದಿದ್ದು, ಇದೇ ಬರುವ ಜುಲೈ 1ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಭೂಮಿ ಪೂಜೆ ನೆರವೇರಿಸುವ  ಸಾಧ್ಯತೆ ಇದೆ. ಈಗಾಗಲೇ ಈ ಸಂಬಂಧ ಸಿದ್ಧತಾ ಕಾರ್ಯಗಳು ಆರಂಭವಾಗಿದ್ದು, ಸುಮಾರು 70 ಎಕರೆ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಕಲ ಸಿದ್ಧತೆಗಳೂ ನಡೆಯುತ್ತಿವೆ.

Also Read  ರಥಸಪ್ತಮಿಯ ದಿನ ಈ ಒಂದು ವಸ್ತುವನ್ನು ಧಾನವಾಗಿ ನೀಡಿದರೆ ಎಲ್ಲ ರೀತಿಯ ಸಂಕಷ್ಟಗಳು ನಿವಾರಣೆಯಾಗುತ್ತವೆ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೇತೃತ್ವದಲ್ಲಿ ರಾಮಮಂದಿರ ದೇಗುಲದ ನಿರ್ಮಾಣ ಕಾರ್ಯಕ್ಕೆ ಸಿದ್ಧತೆ ನಡೆಸಲಾಗಿದೆ. ಈ ಹಿಂದೆ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಟ್ರಸ್ಟ್ ಸದಸ್ಯರು ಭೂಮಿ ಪೂಜೆಗೆ ಆಹ್ವಾನ ನೀಡಿದ್ದರು. ಪ್ರಧಾನಿ ಮೋದಿ ಕೂಡ ಆಹ್ವಾನ ಸ್ವೀಕರಿಸಿದ್ದರು. ಆದರೆ ಬಳಿಕ ಕೊರೋನಾ ವೈರಸ್ ಲೌಕ್ ಡೌನ್ ಆರಂಭವಾಗಿತ್ತು. ಇದೀಗ ಜುಲೈ 1ರ ದೇವ್ಶಯಾನಿ ಏಕಾದಶಿಯಂದು ಭೂಮಿ ಪೂಜೆ ನೆರವೇರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top