SSLC ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ)newskadaba.com ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯು ನಿಗದಿತ ದಿನಾಂಕದಂತೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಯಲಿದೆ. ಮಾಹಾಮಾರಿ ಕೊರೋನಾ ಹಾವಳಿ ಮಧ್ಯೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಬೆಳಗಾವಿಯ ರಾಜಶ್ರೀ ಎಂಬವರು ಸುಪ್ರೀಂಕೋರ್ಟ್ ಕದ ತಟ್ಟಿದ್ದರು.

ಈ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬೆಳಗಾವಿಯ ಮರಾಠಿ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್ ಅವರ ಅರ್ಜಿಯನ್ನು ತಳ್ಳಿಹಾಕಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಕೆಲವು ಸೂಚನೆಗಳನ್ನೂ ಕೂಡಾ ನೀಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶ ನೀಡಿದೆ. ವಿದ್ಯಾರ್ಥಿಗಳ ಆರೋಗ್ಯ ವಿಚಾರದಲ್ಲಿ ಯಾವುದೇ ರಾಜಿ ಮಾಡದಿರಲು ಕಟ್ಟುನಿಟ್ಟಿನ ಸೂಚನೆ ನೀಡಿದೆ.

Also Read  ಬಿಸಿಎಂ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!   ➤ ಪ್ರಕರಣ ದಾಖಲು.!

error: Content is protected !!
Scroll to Top