(ನ್ಯೂಸ್ ಕಡಬ) newskadaba.com ಕಡಬ,ಜೂ.17: ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು.ಸದ್ಯ, ಬೆಥನಿ ನೂಜಿಬಾಳ್ತಿಲ, ಸೈಂಟ್ ಜೋಕಿಮ್ಸ್, ಸರಸ್ವತಿ ಕಾಲೇಜು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 311 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತೀ ಕೊಠಡಿಯಲ್ಲಿ 24 ಮಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಲಾಕ್ ಡೌನ್ ಸಮಸ್ಯೆಯನ್ನು ಎದುರಿಸಿದ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗಾ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು, ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿದ್ದು, ಜೂ. 18 ರಂದು ರಾಜ್ಯಾಧ್ಯಂತ ಈಗಾಗಲೇ ಸೂಚಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸರಕಾರದ ಮಾರ್ಗಸೂಚಿಯಂತೆ , ಬೆಥನಿ ನೂಜಿಬಾಳ್ತಿಲ, ಸೈಂಟ್ ಜೋಕಿಮ್ಸ್, ಸರಸ್ವತಿ ಕಾಲೇಜು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 311 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಾಸ್ಕ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ, ಮಾಡಲಾಗಿದೆ.
ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿದೆ ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಟಿ.ಆರ್. ಮಂಜುನಾಥ್ ತಿಳಿಸಿದ್ದಾರೆ. ಪರೀಕ್ಷೆ ಬರೆಯಲಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರಲು ಸಂಘ ಸಂಸ್ಥೆಗಳು ಅಥವಾ ಖಾಸಗಿ ವ್ಯಕ್ತಿಗಳು ವಾಹನದ ವ್ಯವಸ್ಥೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.